Skip to main content

ವೇದಮಂತ್ರ ಶಕ್ತಿ (Veda Mantra Shakti)

ಕಾಲದ ಸೂಕ್ಷ್ಮ ವಿಭಾಗಗಳು, ಮಂತ್ರವೇಗ, ಮಂತ್ರಶಕ್ತಿ, 1D-16D ಇತ್ಯಾದಿ ಉನ್ನತ ಆಯಾಮ ವಿಜ್ಞಾನ. ಆಸ್ತೀಕ ವಚನ, ಬಂಡೆ ಸೀಳುವಷ್ಟು ತೀಕ್ಷ್ಣ ಮಂತ್ರ ತರಂಗಗಳು, ದುಷ್ಪ್ರಯೋಗ ಆಗದಂತೆ ಋಷಿಮುನಿಗಳಿಂದ ಮಂತ್ರಗಳ ತಹಬಂಧಿ, ಮನೋ ಬಲ + ಕೆಲ ಮಂತ್ರದ ಶಕ್ತಿ = ರಾವಣನು ಕೈಲಾಸವನ್ನೇ ಅಲುಗಾಡಿಸಿದ. ವೇದ ಮಂತ್ರಗಳ ಶಕ್ತಿ ಅಪಾರ.

ಶ್ರೀಮದ್ವಾಜಪೇಯ ಯಾಗದ ಸಂದರ್ಭದಲ್ಲಿ ಬ್ರಹ್ಮರ್ಷಿ ಕೆ. ಎಸ್. ನಿತ್ಯಾನಂದ ಸ್ವಾಮೀಜಿ, ಪೂರ್ವೋತ್ತರೀಯ ಮೀಮಾಂಸಕರು, ವೇದ ವಿಜ್ಞಾನ ಮಂದಿರ, ಚಿಕ್ಕಮಗಳೂರು, ಕರ್ನಾಟಕ, ಭಾರತ - ಇವರೊಂದಿಗೆ ನಡೆಸಿದ ಪ್ರಶ್ನೋತ್ತರದ ಚಿತ್ರೀಕರಣದ ತುಣುಕಿದು.


Minute time divisions, speed of mantra, energy in mantras, 1D-16D Higher dimensions from in Vedas. Words of Aastika sage & hidden formula, higher energy mantras that can crush the rocks, sages encrypted mantras to protect its misuse, mind power + some mantra power = Ravana shivered the mount Kailasa. Power of Veda mantras are enormous.

Clippings are from Question & Answer session held during Shrimad Vaajapeya Yaaga. Answers are by Brahmarshi K S Nityananda Swamiji, Purvottariya Meemamsaka, Veda Vijnana Mandira, Chikmagalur, Karnataka, India.


Comments

Popular posts from this blog

ಯಾಗದಲ್ಲಿ ಪಶುಬಲಿ ಪ್ರಹಸನ - ಒಂದು ಅಭಿಪ್ರಾಯ

- ಸಂಗ್ರಹ

ಭಾರತ ದೇಶವೆಲ್ಲಿದೆ? ಏನಾಗುತ್ತಿದೆ? ಇದೇನು ಧೈವಸಂಕಲ್ಪ? ನೇತ್ರಾವತಿ ತಿರುವು ಯೋಜನೆಯ ಸಾಧಕ ಬಾಧಕಗಳೇನು?

ಒಂದಾನೊಂದು ಕಾಲದಲ್ಲಿ ಲೋಕಗುರುವಾಗಿದ್ದು, ಸಕಲ ದೇವಾನುದೇವತೆಗಳಿಗೂ ಮಾತೃಭೂಮಿಯೆನ್ನಿಸಿಕೊಂಡ ಈ ಭಾರತ ಭೂಮಿ ಪರಿಸ್ಥಿತಿ ಕೈಮೀರಿ ಹೋಗಿದ್ದು ಯಾವುದೇ ಧರ್ಮ, ಮತ, ದೇವರು, ಚಿಂತಕ, ಬುದ್ಧಿಜೀವಿ ದಡ ದಾಟಿಸಲಾರದ ಪರಿಸ್ಥಿತಿಗೆ ಬಂದು ನಿಂತಿದೆ. ಇದರ ಕಾರಣದ ಹಿನ್ನೆಲೆಯಲ್ಲಿ ನಾವು ಚಿಂತಿಸಹೊರಟರೆ ಒಂದು ಭಯಾನಕ, ಬೀಭತ್ಸ ಚಿತ್ರಣ ಮೂಡಿಬರುತ್ತಿದೆ. ಈ ನಿಟ್ಟಿನಲ್ಲಿ ಒಂದು ಚಿಂತನಾ ಪ್ರಬಂಧ ಬರೆದು ಲೇಖಿಸುವ ಮತ್ತು ಪ್ರಕಟಿಸುವ ಪ್ರಯತ್ನ ಮಾಡುತ್ತಿದ್ದೇನೆ ಗಮನಿಸಿ. ಓದಿ. ನಿಮಗೆ ಬೇಕಿದ್ದರೆ ತಿದ್ದುವ ಪ್ರಯತ್ನ ಮಾಡಿರಿ ಎಂದು ಪ್ರಾರ್ಥನೆ.
ಮೊದಲಾಗಿ ಭಾರತದೇಶದ ಮೂಲ ತಳಹದಿಯ ಚಿಂತನೆ ಮಾಡೋಣ. ಒಂದು ಯಾವುದೇ ಅಭಿವೃದ್ಧಿ ಸಾಧಿಸಲಿ ಅದು ಈ ಮೂಲ ತಳಹದಿಯ ನೆಲೆಯಲ್ಲೇ ಸಾಗಿರಬೇಕು. ಆಗ ನಿರಂತರ ಅಬಾಧಿತ, ಲಾಭದಾಯಕ, ಬೌದ್ಧಿಕ ಉನ್ನತಿಗೆ ಕಾರಣ. ಮಾನವೀಯ ಸಮೃದ್ಧ ಸಮಾಜ ಸೃಷ್ಟಿ ಸಾಧ್ಯ. ಮೂಲ ಸಿದ್ಧಾಂತ ಬಿಟ್ಟರೆ ಅದೆಂದೂ ಉದ್ಧಾರವಾಗಲಾರದು. ಸರ್ವಜ್ಞ ನೊಂದು ಮಾತು ಹೇಳಿದ್ದಾನೆ “ಕಜ್ಜಿಯ ಕೆರೆದಂತೆ” ಎಂದು. ಕೆರೆಯುವಾಗ ಆರಂಭದಲ್ಲಿ ಆಪ್ಯಾಯಮಾನ, ಆನಂದದಾಯಕ. ನಂತರ ಕೆರೆತದ ಕಾರಣದಿಂದಾಗಿ ಹುಣ್ಣಾಗಿ ಕೊಳೆತರೆ ಆ ಅಂಗವೇ ಕತ್ತರಿಸಬೇಕಾದೀತು. ನಂತರ ವಿಕಲಾಂಗವೇ ಗತಿ ಪುನಾರೂಪಿಸಲಾಗದ್ದು. ಈಗಿನ ನಮ್ಮ ರಾಜಕಾರಣಿಗಳು, ಯೋಜನಾಧಿಕಾರಿಗಳು ಈ ಕಜ್ಜಿ ಕೆರೆತದಷ್ಟೇ ಫಲ ನಿರೀಕ್ಷೆಯ ಯೋಜನೆ ತಯಾರಿಸುತ್ತಿದ್ದಾರೆ. ಭವಿಷ್ಯದ ಪರಿಣಾಮ ಅಷ್ಟೇ ಅಪಾಯಕಾರಿ. ಉದಾ:-…